Wednesday, October 15, 2025
Google search engine

Homeರಾಜ್ಯಹಾಸನಾಂಬೆಯ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನಾಂಬೆಯ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ತಾಯಿ ಹಾಸನಾಂಬೆಯ ದೇಗುಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ದರ್ಶನ ಪಡೆದರು.

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿಯ ದರ್ಶನಕ್ಕೆ ಕರೆದೊಯ್ದಿತ್ತು. ದೇವಿ ದರ್ಶನ ಪಡೆದ ಸಿಎಂ ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

ಈ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ ಬೋರಲಿಂಗಯ್ಯ, ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular