Sunday, November 9, 2025
Google search engine

Homeರಾಜ್ಯಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

ಬೆಂಗಳೂರು : ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳು ಎಂದಿನಂತೆ ಶಾಲೆಗೆ ಹಾಜರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನು ಸರ್ವೆ ಕಾರ್ಯಕ್ಕೆ ಬಳಸಿಕೊಂಡಿತ್ತು. ಸರ್ವೆ ಕಾರ್ಯ ಮುಂದುವರಿಯುತ್ತಿದ್ದರೂ ಶಿಕ್ಷಕರನ್ನ ಸರ್ವೆ ಕಾರ್ಯದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನ ಹೊರತುಪಡಿಸಿ ಉಳಿದವರಿಂದ ಸರ್ವೆ ಕಾರ್ಯ ಮುಂದುವರಿಯುತ್ತಿದೆ.

ಈ ಹಿನ್ನೆಲೆ ಇಂದಿನಿಂದ ತರಗತಿಗಳು ಮರು ಪ್ರಾರಂಭವಾಗಿದೆ. ರಜೆಯಲ್ಲಿ ಮಿಸ್ ಆಗಿರುವ ಸಿಲಬಸ್ ಮುಕ್ತಾಯಕ್ಕೆ ಕೆಲವು ಮಹತ್ವದ ಸೂಚನೆಯನ್ನು ಶಿಕ್ಷಣ ಇಲಾಖೆ ನೀಡಿದೆ.

ಶಿಕ್ಷಣ ಇಲಾಖೆ ಸೂಚನೆಗಳೇನು?

ಡಿಸೆಂಬರ್ – ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು. ಒಂದು ತಿಂಗಳು ಆಗಿರೋ ಸಿಲಬಸ್ ಲಾಸ್ ತುಂಬಲು ವಿಶೇಷ ತರಗತಿಗಳನ್ನ ನಡೆಸಬೇಕು. ಬೆಳಗ್ಗೆ ಶಾಲೆ ಮುಂಚೆ ಅಥವಾ ಸಂಜೆ ಶಾಲೆ ಮುಗಿದ ಮೇಲೆ ವಿಶೇಷ ತರಗತಿ ತೆಗೆದುಕೊಂಡು ಪಠ್ಯ ಪೂರ್ಣ ಮಾಡಬೇಕು.

ಶನಿವಾರ ಅರ್ಧ ದಿನದ ಬದಲಾಗಿ ಪೂರ್ಣ ತರಗತಿಗಳನ್ನು ನಡೆಸಿ ಪಠ್ಯ ಪೂರ್ಣ ಮಾಡಬೇಕು. ತೀರಾ ಅಗತ್ಯವಿದ್ದರೆ ರಜಾ ದಿನಗಳಲ್ಲೂ ವಿಶೇಷ ತರಗತಿ ನಡೆಸಿ ಪಠ್ಯ ಬೋಧನೆ ಪೂರ್ಣ ಮಾಡಬೇಕು ಎಂದು ಸೂಚನೆಗಳು ನೀಡಿದೆ.

RELATED ARTICLES
- Advertisment -
Google search engine

Most Popular