ಮೈಸೂರು : ದನ ಮೇಯಿಸಲು ಹೋಗಿದ್ದ ವೇಳೆ ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು ತಾಲೂಕಿನ ಮುಳ್ಳೂರು ಬಳಿ ಹುಲಿ ಸೆರೆಯಾಗಿದೆ. ಯಡಿಯಾಲ ಅರಣ್ಯ ವಲಯದ ಮುಳ್ಳೂರು ಬಳಿ ಅರವಳಿಕೆ ನೀಡಿ ಹುಲಿಯನ್ನು ಸೆರೆಹಿಡಿಯಲಾಯಿತು.
ಸೆರೆಹಿಡಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಹುಲಿ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.



