ಮಂಗಳೂರು: ಬೆಳ್ತಂಗಡಿ ತಾಲೂಕು ಸೋಣಂದೂರು ಗ್ರಾಮದ ಪೆಮ್ಮಜೆ ಗ್ರಾಮದ ನಿವಾಸಿ ರವಿಚಂದ್ರ ಎಸ್ (41) ಮೇ 15 ರಂದು ಬೆಳಿಗ್ಗೆ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:-ಎತ್ತರ ಸುಮಾರು 5.6 ಅಡಿ, ಎಣ್ಣೆಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಪ್ಯಾಂಟ್, ಹಳದಿ ಬಣ್ಣದ ಉದ್ದ ತೋಳಿನ ಶರ್ಟ್ ಧರಿಸಿದ್ದರು. ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



