ವರದಿ :ಸ್ಟೀಫನ್ ಜೇಮ್ಸ್
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೂಪಕಗಳ ಮೆರವಣಿಗೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಬೆಳಗಾವಿಯ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆರವಣಿಗೆ ವೇಳೆ ಜನರ ನಡುವೆಯೇ ನುಗ್ಗಿ ಬಂದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.




