ಮುಂಬೈ : ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ಸ್‌ನಲ್ಲಿ ಭಾರತ ತಂಡ ಅದ್ಭುತ ಗೆಲುವು ಸಾಧಿಸಿದೆ. ಈ ಫೈನಲ್ ಪಂದ್ಯದಲ್ಲಿ ಅವರು ತೋರಿದ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸ ಕೂಡಿತ್ತು.
ತಂಡವು ಟೂರ್ನಿಯುದ್ಧಕ್ಕೂ ಅಸಾಧಾರಣ ಸಾಮರ್ಥ್ಯ ತೋರಿದ, ದೃಢತೆ ಸಾಬೀತುಪಡಿಸಿದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಚಾಂಪಿಯನ್‌ಗಳು ಕ್ರೀಡೆಗಳನ್ನ ಕೈಗೆತ್ತಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ಶುಭಹಾರೈಸಿದ್ದಾರೆ.



