ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಾಸಕ ಹೆಚ್ ವೈ ಮೇಟಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಶಾಸಕ ಹೆಚ್ ವೈ ಮೇಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೆಚ್ ವೈ ಮೇಟಿ ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.



