ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಹಾಗೂ ವಿವಿಧ ರೈತ ಮುಖಂಡರು ನಡೆಸುತ್ತಿರು ಪ್ರತಿಭಟನೆ ವಿಕೋಪಕ್ಕೆ ತಿರುಗಿ ಶುಕ್ರವಾರ ಚನ್ನಮ್ಮ ವೃತ್ತದಲ್ಲಿ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಹಾಗೂ ರೈತ ಮುಖಂಡರು ಚನ್ನಮ್ಮ ವೃತ್ತಕ್ಕೆ ಆಗಮಿಸಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

ಇದಕ್ಕೂ ಮುನ್ನ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಕೇಂದ್ರ ಬಸ್ ನಿಲ್ದಾಣದಿಂದ ಸಂಗೊಳ್ಳಿ ರಾಯಣ್ಣನ ವೃತ್ತದ ಮಾರ್ಗವಾಗಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ, ಕನ್ನಡ ಹೋರಾಟಗಾರರಾದ ಮಹಾಂತೇಶ ರಣಗಟ್ಟಿಮಠ, ಅಶೋಕ ಚಂದರಗಿ, ರೈತ ಮುಖಂಡರಾದ ರಾಘವೇಂದ್ರ ನಾಯಕ, ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



