Tuesday, November 11, 2025
Google search engine

Homeರಾಜಕೀಯಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ.ಕೃಷ್ಣಾರೆಡ್ಡಿ, ಸಂಚಾಲಕರಾಗಿ ಎ.ಮಂಜು ನೇಮಕ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ.ಕೃಷ್ಣಾರೆಡ್ಡಿ, ಸಂಚಾಲಕರಾಗಿ ಎ.ಮಂಜು ನೇಮಕ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಪ್ರಮುಖರ ಸಮಿತಿ(ಕೋರ್ ಕಮಿಟಿ)ಯನ್ನು ಪುನರ್ ರಚನೆ ಮಾಡಿದ್ದು, ಮಾಜಿ ಶಾಸಕ ಹಾಗೂ ವಿಧಾನಸಭೆಯ ಮಾಜಿ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಶಾಸಕ ರಾಜವೆಂಕಟಪ್ಳ ನಾಯಕ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಎಂ.ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಎಚ್.ಕೆ.ಕುಮಾರಸ್ವಾಮಿ, ಸಿ.ಎಸ್.ಪುಟ್ಟರಾಜು,

ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಕೆ.ಎಂ.ತಿಮ್ಮರಾಯಪ್ಪ, ಎ.ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ.ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ.ಚಂದ್ರಶೇಖರ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular