ವರದಿ :ಸ್ಟೀಫನ್ ಜೇಮ್ಸ್.
ನವದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದೀಗ ಬಂದ ಮಾಹಿತಿ ಪ್ರಕಾರ ದುರಂತದಲ್ಲಿ 9 ಜನ ಸಾವನ್ನಪ್ಪಿದ್ದು, ಸ್ಫೋಟದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ಸಂಬಂಧ ದೆಹಲಿ ಮಾತ್ರವಲ್ಲದೇ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಈ ಬಗ್ಗೆ ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಅಧೀಕ್ಷಕ ಪ್ರತಿಕ್ರಿಯಿಸಿದ್ದು, ಹದಿನೈದು ಜನರನ್ನು ಲೋಕ ನಾಯಕ ಆಸ್ಪತ್ರೆಗೆ ಕರೆತಂದಿದ್ದು, ಈ ಪೈಕಿ ಎಂಟು ಜನ ಆಸ್ಪತ್ರೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ. ಮೂವರು ಸ್ಥಿತಿ ಗಂಭೀರವಾಗಿದ್ದು, ಒಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
NEWS UPDATE: ಸಾವಿನ ಸಂಖ್ಯೆ 13 ಕ್ಕೆ ಏರಿಕೆ 30 ಮಂದಿಗೆ ಗಾಯಾಳು, ಸ್ಪೋಟದ ಸ್ಥಳಕ್ಕೆ ಅಮಿತ್ ಶಾ ಭೇಟಿ. ಓರ್ವ ಶಂಕಿತ ವ್ಯಕ್ತಿಯ ವಿಚಾರಣೆ ,ಹುಂಡೈ I20 ಕಾರ್ ನ ಮಾಲೀಕ ಸಲ್ಮಾನ್ ವಶ .ಬಾಂಬ್ ನಿಷ್ಕ್ರಿಯ ದಳ ,FSL ತಂಡದಿಂದ ಪರಿಶೀಲನೆ. ಸ್ಪೋಟದ ತೀವ್ರತೆಗೆ ೨೨ ಕಾರು ೧೦ ಕ್ಕೂ ಹೆಚ್ಚು ಬೈಕ್ಗಳು ಜಖಂ.ಸುಟ್ಟು ಕರಕ ಲಾಗಿದೆ




