ಮಂಗಳೂರು (ದಕ್ಷಿಣ ಕನ್ನಡ):ಮಂಗಳೂರು ನಗರದಲ್ಲಿ ಮಟ ಮಟ ಮಧ್ಯಾಹ್ನ ಕಾರೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಂತೂರಿನ ಜಂಕ್ಷನ್ ಎಂಬಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಈ ಕಾರಲ್ಲಿ ಇದ್ದ ಮೂವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಮಂದಿ ಸಮಯ ಪ್ರಜ್ಞೆ ಮೆರೆದು ನೀರಿನ ಟ್ಯಾಂಕರ್ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ. ವಿಷ್ಯ ತಿಳಿದು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.



