ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ಕಲುಶಿತ ನೀರು ಸೇವಿಸಿ ರಾಣಿ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದದಲ್ಲಿ ಸುಮಾರು 10ಕ್ಕೂ ಅಧಿಕ ಜಿಂಕೆಗಳು ಮೃತಪಟ್ಟಿರುವ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಸೂಚನೆ ನೀಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆಯೇ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿರುವ ಜಿಂಕೆಗಳು ಕಲುಶಿತ ನೀರು ಸೇವಿಸಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಗಮನಕ್ಕೆ ಬರುತ್ತಿದ್ದಂತೆಯೇ ಜಿಂಕೆ ಸಾವಿನ ಬಗ್ಗೆ ತನಿಖೆ ನಡೆಸಲು ಸೂಚನೆ ಹೊರಡಿಸಿದ್ದಾರೆ. ಈ ಬಗ್ಗೆ ಮಾಹಿತಿಗಾಗಿ ವಲಯ ಅರಣ್ಯಾಧಿಕಾರಿ ಪವನ ಕುರನಿಂಗ ಅವರನ್ನು ನಿರಂತರವಾಗಿ ಸಂಪರ್ಕಿಸಿದರು ಮಾಹಿತಿ ನೀಡದೆ ಜಾರಿಕೊಳ್ಳುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.

ರಾಣಿ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಜಿಂಕೆಗಳ ಸಾವು !!!
ಮೈಸೂರಿನ ತಜ್ಞ ಪ್ರಾಣಿ ವೈದ್ಯರು ಇಂದು ಬೆಳಗಾವಿಗೆ ದೌಡು; ಎ.ಸಿ.ಎಫ್ ನಾಗರಾಜ್



