Tuesday, November 25, 2025
Google search engine

Homeಅಪರಾಧಸ್ಕೂಟರಲ್ಲಿ ಹೋಗುತ್ತಿದ್ದ ವೇಳೆ ಯುವಕನ ಮೇಲೆ ದಾಳಿ

ಸ್ಕೂಟರಲ್ಲಿ ಹೋಗುತ್ತಿದ್ದ ವೇಳೆ ಯುವಕನ ಮೇಲೆ ದಾಳಿ

ಮಂಗಳೂರು(ದಕ್ಷಿಣ ಕನ್ನಡ): ಯುವಕನೋರ್ವನಿಗೆ‌ 4 ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಎಡಪದವು ಎಂಬಲ್ಲಿ ನಡೆದಿದೆ. ಅಖಿಲೇಶ್, ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲ‌ಕೈಗೆ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಸ್ಕೂಟರಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ‌ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಅಖಿಲೇಶ್ ರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇವರು ಸ್ಥಳಿಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular