ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿಯಮಿತ(ಸೆಸ್ಕ್)ದ ವತಿಯಿಂದ ಭಾರತದ ಸಂವಿಧಾನ ಪೀಠಿಕೆಯ ಬೋಧನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಬುಧವಾರ ನಡೆಯಿತು.
ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಭಾರತದ ಸಂವಿಧಾನದ ಪ್ರಸ್ತಾವನೆ ಹೊಂದಿದ್ದ ಫೋಟೋಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಭಾರತದ ಸಂವಿಧಾನ ಪೀಠಿಕೆ ಬೋಧಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಅಕಾಲಿಕ ಮರಣ ಹೊಂದಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸೆಸ್ಕ್ ನ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೌನಾಚರಣೆ ಸಲ್ಲಿಸುವ ಮೂಲಕ ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ(ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಆಂತರಿಕ ಲೆಕ್ಕ ಪರಿಶೋಧನೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕ ಎಲ್. ಲೋಕೇಶ್, ರಾಮಸ್ವಾಮಿ ಸೇರಿದಂತೆ ನಿಗಮ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.



