Friday, November 28, 2025
Google search engine

Homeರಾಜ್ಯಉಡುಪಿಯಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ ಮಾಡಲಿರುವ ಮೋದಿ

ಉಡುಪಿಯಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ ಮಾಡಲಿರುವ ಮೋದಿ

ಪಣಜಿ : ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ನಾಳೆ(ನ.28) ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಠದ ಪ್ರತಿನಿಧಿ ತಿಳಿಸಿದ್ದಾರೆ. ಪ್ರಧಾನಿ ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ಆಗಮಿಸಲಿದ್ದು, ಮಠದ ಆವರಣದಲ್ಲಿ ವಿಶೇಷ ಹೆಲಿಪ್ಯಾಡ್‌ ನಿರ್ಮಿಸಲಾಗಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್‌‍ ಡೆಂಪೊ ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್‌ ಸುತಾರ್‌ ಅವರು ಶ್ರೀರಾಮನ ಪ್ರತಿಮೆಯನ್ನು ವಿನ್ಯಾಸಗೊಳಿದ್ದಾರೆ. ಅದಲ್ಲದೆ ಇದು ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆಯಾಗಲಿದೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ್‌ ಕಾಮತ್‌ ತಿಳಿಸಿದ್ದಾರೆ.

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೊದಲು ಪ್ರಧಾನಿ ಮೋದಿ ಮಠದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಗೋವಾ ರಾಜ್ಯಪಾಲ ಅಶೋಕ್‌ ಗಜಪತಿ ರಾಜು, ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಕೇಂದ್ರ ಸಚಿವ ಶ್ರೀಪಾದ ನಾಯಕ್‌, ರಾಜ್ಯ ಸಚಿವ ಸಂಪುಟದ ಸಚಿವರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬಳಿಕ ಮಠದ ಸಂಪ್ರದಾಯದ 550 ವರ್ಷಗಳನ್ನು ಗುರುತಿಸಲು ನವೆಂಬರ್‌ 27 ರಿಂದ ಡಿಸೆಂಬರ್‌ 7 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲು ಯೋಜಿಸಲಾಗಿದೆ ಎಂದು ಹೇಳಿದರು. ಈ ವೇಳೆ ಯುಗಯುಗಗಳಿಂದ ಆಧ್ಯಾತ್ಮಿಕ ಕೇಂದ್ರವಾಗಿ ಸೇವೆ ಸಲ್ಲಿಸುತ್ತಿರುವ ಮಠದ ಆವರಣವನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ ಮತ್ತು ಆಧುನಿಕ ನೋಟವನ್ನು ನೀಡಲಾಗಿದೆ ಎಂದು ಕಾಮತ್‌ ತಿಳಿಸಿದರು.

RELATED ARTICLES
- Advertisment -
Google search engine

Most Popular