Friday, November 28, 2025
Google search engine

Homeರಾಜ್ಯಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ : ಹೂಮಳೆ ಸುರಿಸಿ ಸ್ವಾಗತ

ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ : ಹೂಮಳೆ ಸುರಿಸಿ ಸ್ವಾಗತ

ಉಡುಪಿ: ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿ, ಅಲ್ಲಿಂದ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಯ ಹೆಲಿಪ್ಯಾಡ್ ಗೆ ಆಗಮಿಸಿದ್ದಾರೆ.

ಅಲ್ಲಿಂದ ರೋಡ್ ಶೋ ಮುಖೇನ, ಉಡುಪಿ ಕೃಷ್ಣ ಮಠದೆಡೆಗೆ ಬರುತ್ತಿರುವ ಮೋದಿ, ಈ ವೇಳೆ ಲಕ್ಷಾಂತರ ಮಂದಿ ದಾರಿಯುದ್ದಕ್ಕೂ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ. ರೋಡ್ ಶೋನಲ್ಲಿ ಪ್ರಧಾನಿ ಮೋದಿ ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.
ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕ ನಮೋರವರನ್ನ ಹತ್ತರದಿಂದ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚೆಯೇ ಮೋದಿ ಆಗಮನ :
ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್​ , ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಈ ಬಗ್ಗೆ ಉಡುಪಿ ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ ಮತ್ತು ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular