Monday, December 1, 2025
Google search engine

Homeರಾಜಕೀಯಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್

ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದ್ದು, ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಒಂದೇ ಒಂದು ಬ್ರೇಕ್‌ಫಾಸ್ಟ್ ಮೀಟಿಂಗ್ ಅಲ್ಪ ವಿರಾಮ ಇಟ್ಟಿದೆ. ಈ ಬಗ್ಗೆ ಹೈಕಮಾಂಡ್ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ನಿನ್ನೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಹೈಕಮಾಂಡ್ ಸಭೆ ನಡೆಯಲಾಗಿದ್ದರೂ ಕರ್ನಾಟಕದ ರಾಜಕೀಯ ಬೆಳವಣಿಗೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿರಲಿಲ್ಲ. ಸಂಸತ್ ಅಧಿವೇಶನ ಅಜೆಂಡಾಗಳ ಬಗ್ಗೆ ಚರ್ಚೆ ನಡೆದಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ವಿದ್ಯಮಾನಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ʻಕೈʼ ನಾಯಕಿ ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ʻಕುರ್ಚಿʼ ಫೈಟ್‌, ಬ್ರೇಕ್‌ ಫಾಸ್ಟ್‌ ಮೀಟಿಂಗ್‌, ಜಂಟಿ ಸುದ್ದಿಗೋಷ್ಠಿ ಬಗ್ಗೆ ಖರ್ಗೆ ಅವರು ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ 2-3 ನಿಮಿಷಗಳಲ್ಲಿ ರಾಜ್ಯದ ವಿಷಯ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಶೀಘ್ರವೇ ಪರಿಶೀಲಿಸುವುದಾಗಿ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಆದರೆ ಸಿಎಂ, ಡಿಸಿಎಂ ದೆಹಲಿ ಬುಲಾವ್‌ ವಿಚಾರನ್ನ ತಾತ್ಕಾಲಿಕವಾಗಿ ಮುಂದೂಡಿದ್ದಾರೆ ಎನ್ನಲಾಗಿದೆ.

ಕುರ್ಚಿಗಾಗಿ ಜಿದ್ದಿಗೆ ಬಿದ್ದಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ಆದೇಶ ಏನಾಗುತ್ತೆ ಅಂತ ಚಿತ್ತ ಹರಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೀವಿ ಎಂದು ಡಿಕೆಶಿ-ಸಿದ್ದು ನಡುವೆ ನಿನ್ನೆ ಸಂಧಾನದ ಬ್ರೇಕ್‌ಫಾಸ್ಟ್ ನಡೆದಿದೆ. ಬ್ರೇಕ್‌ಫಾಸ್ಟ್ ಮೂಲಕ ಶೀತಲ ಸಮರಕ್ಕೆ ಅಲ್ಪ ವಿರಾಮ ಹಾಕಿದ್ದು, ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅಂತ ಡಿಕೆಶಿ ಪುನರುಚ್ಛರಿಸಿದ್ದಾರೆ.

RELATED ARTICLES
- Advertisment -
Google search engine

Most Popular