ಕಾರವಾರ : ಮೈಸೂರು ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಉರುಳಿ ಬಿದ್ದು ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡ ವಿದ್ಯಾರ್ಥಿಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ತರಳಬಾಳು ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಭರಿಸಲಿದೆ ಎಂದು ಕೆ ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ತಿಳಿಸಿದರು.
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಹೊನ್ನಾವರ ಬಳಿ ಅಪಘಾತಕ್ಕೀಡಾಗಿ ಒರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಕೆಲ ವಿದ್ಯಾರ್ಥಿಗಲು ಹಾಗೂ ಶಿಕ್ಷಕರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ತರಳಬಾಳು ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು ಪವನ್ ಎಂಬ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಆತ ಬಡ ಕುಟುಂಬ ವಿದ್ಯಾರ್ಥಿಯಾಗಿದ್ದಾನೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಪೋಷಕರಿಗೆ ಶಾಲಾ ಆಡಳಿತ ಮಂಡಳಿ 30 ಲಕ್ಷ ಪರಿಹಾರ ನೀಡಲಿದೆ. ಜೊತೆಗೆ ಜನವರಿಯಲ್ಲಿ ಕುಟುಂಬಕ್ಕೆ ಆಶ್ರಯ ಯೋಜನೆಯಡಿ ಮನೆ ಅಥವಾ ನಿವೇಶನ ನೀಡಲಾಗುವುದು. ನಾವು ಏನೇ ಕೊಟ್ಟರೂ ಆ ತಂದೆ ತಾಯಿಗೆ ಮಗನ್ನು ಕೊಡಲು ಸಾದ್ಯವಿಲ್ಲ ಎಂದು ಸಂತಾಪ ಸೂಚಿಸಿದರು.
ಶಾಲೆಗಳು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವಾಗ ಸರ್ಕಾರ ಮಾರ್ಗಸೂಚಿ ಪಾಲಿಸಬೇಕು. ಈ ಶಾಲೆಯವರು ಸರ್ಕಾರದ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಗೊತ್ತಾಗಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲೆ ಪ್ರವಾಸಕ್ಕೆ ಕರೆದುಕೊಂಡು ಹೊಗಬೇಕು ಎಂಬು ನಿಯಮ ಇದೆ. ಈ ನಿಯಮ ಪಾಲನೆ ಆಗಿಲ್ಲ. ಸಂಸ್ಥೆಯ ಲೋಪದೋಷಗಳೂ ಇವೆ. ಇದನ್ನು ಇಲಾಖೆ ಅಧಿಕಾರಿಗಳು ಕ್ರಮವಹಿಸುತ್ತಾರೆ. ಸರ್ಕಾರಿ ಬಸ್ ನಲ್ಲಿ ಹೋಗಿದ್ದರೆ 10 ಲಕ್ಷ ಮತ್ತು ನ್ಯಾಯಾಲದ ತೀರ್ಮಾನದಂತೆ ಪರಿಹಾರ ಸಿಗುತ್ತಿತ್ತು. ಈ ದುರ್ಘಟನೆ ನಡೆಯಬಾರದಿತ್ತು. ನಡೆದುಹೋಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿರುವ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದರು.
ಶಾಸಕ ಹರೀಶ್ ಗೌಡ ಮಾತನಾಡಿ, ಈ ಘಟನೆಗೆ ಚಾಲಕನ ಅಜಾಗರೂಕತೆ ಕಾರಣವಾಗಿದೆ. ಶಾಲಾ ಆಡಳಿತ ಮಂಡಳಿ ಜೊತೆ ಸಭೆ ಮಾಡಿದ್ದೇವೆ ಮಂಡಳಿ ಉತ್ತಮ ಸ್ಪಂದನೆ ನೀಡಿದೆ. ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಶಾಸಕ ಶ್ರೀವತ್ಸ ಮಾನವೀಯತೆಯಿಂದ ಆಶ್ರಯ ಯೋಜನೆಯಡಿ ಮನೆ ನೀಡುವ ಭರವಸೆ ನೀಡಿದ್ದಾರೆ. ಹೊನ್ನಾವರದ ಬಳಿ ಅಪಘಾತವಾಗಿದೆ ಅಲ್ಲಿನ ಶಾಸಕ ಹಾಗೂ ಸಚಿವರಾದ ಮಂಕಾಳ್ ವೈದ್ಯ ಅವರ ಜೊತೆ ಕೂಡ ಮಾತನಾಡಿದ್ದೇನೆ. ಅವರ ಪುತ್ರಿ ಬೀನ ವೈದ್ಯ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ. ಪ್ರವಾಸ ತೆರಳಿದ್ದ ಮಕ್ಕಳನ್ನು ವಾಪಸ್ ಕರೆಸುವ ವಿಚಾರವನ್ನು ನಾನು ಸಿಎಂ ಗಮನಕ್ಕೂ ತಂದಿದ್ದೆ. ಅಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಬೇಕೊ ಎಲ್ಲವನ್ನು ಮಾಡಿದ್ದಾರೆ ಎಂದರು.
ಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು ನಗರ ಪಾಲಿಕೆ ಮಾಜಿ ಸದಸ್ಯ ಗೋಪಿ,ಬಿಆರ್ ಸಿ ಶ್ರೀಕಂಠಸ್ವಾಮಿ ಸೇರಿಂದತೆ ಪೋಷಕರು ಹಾಗು ಮುಖಂಡರು ಹಾಜರಿದ್ದರು.
ಪ್ರವಾಸ ಸಂದರ್ಭದಲ್ಲಿ ಶಾಲೆಗಳವರು ಬಿಇಒ ಕಚೇರಿ ಅನುಮತಿ ಪಡೆಯಬೇಕು. ಆದರೆ ಈ ಶಾಲೆಯವರು ಅನುಮತಿ ಪಡೆದಿಲ್ಲ. ಪ್ರವಾಸಕ್ಕೆ ತೆರಳುವ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಸರ್ಕಾರ ಸುತ್ತೋಲೆ ಪ್ರಕಾರ 11 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಅದರಲ್ಲಿ ಕೆ ಎಸ್ ಆರ್ ಟಿಸಿ ಅಥವಾ ಕೆಎಸ್ ಟಿಡಿಸಿ ಬಸ್ ನಲ್ಲೆ ತೆರಳಬೇಕು ಎಂಬ ನಿಯಮ ಇದೆ. ಇವರು ಖಾಸಗಿ ಬಸ್ ನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ಹಿಂದೆಯೇ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗಿದೆ. ಈ ಸಂಬಂಧ ಮಕ್ಕಳು ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಪಾಲಿಸಬೇಕು ಎಂದು ಎಲ್ಲಾ ಶಾಲೆಗಳಿಗೂ ಸೂಚನೆ ನೀಡಿಲಾಗಿದೆ. ಮಾರ್ಗಸೂಚಿ ಪಾಲನೆ ಮಾಡದ ತರಳಬಾಳು ಶಾಲೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು.
-ಉದಯ್ ಕುಮಾರ್ ಡಿಡಿಪಿಐ



