ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ನೂತನ ಅಧ್ಯಕ್ಷರಾಗಿ ಕೊಣಸೂರು ಆನಂದ್ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಹಿಂದೆ ತಾಲೂಕು ಅಧ್ಯಕ್ಷರಾಗಿದ್ದ ಕೋಮಲಾಪುರ ಸ್ವಾಮಿಗೌಡ ಅವರ ಅವಧಿ ಮುಗಿದ ಹಿನ್ನೆಲೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೊಣಸೂರು ಆನಂದ್ ಅವರನ್ನು ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಮೈಸೂರು ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಿರಿಯಾಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷರನ್ನು ತಾಲೂಕು ರೈತ ಸಂಘ ಪದಾಧಿಕಾರಿಗಳು, ಸದಸ್ಯರು ಹಾಗು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಘಟಕ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ವಿವಿಧ ಸಂಘ ಸಂಸ್ಥೆ ಮತ್ತು ಕೊಣಸೂರು ಗ್ರಾಮಸ್ಥರು ಅಭಿನಂದಿಸಿದ್ದಾರೆ.



