Friday, December 12, 2025
Google search engine

Homeರಾಜಕೀಯಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ..!

ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಳಗಾವಿ: ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರ ವಿರುದ್ಧ ಕಾಂಗ್ರೆಸ್ ಶಾಸಕ ನಾಗರಾಜ್ ಯಾದವ್ ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಪಕ್ಷಾತೀತವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯರು, ಸಭಾಧ್ಯಕ್ಷರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ತನಿಖೆ ನಡೆಸಲು ಉಪಾಧ್ಯಕ್ಷ ಎಂ.ಕೆ. ಪ್ರಾಣೇಶ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.

ಈ ಕುರಿತು ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮುನ್ನ, ಪರಿಷತ್ ಸಚಿವಾಲಯದಲ್ಲಿ ಇತ್ತೀಚೆಗೆ 30 ಸಿಬ್ಬಂದಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಹೊರಟ್ಟಿ ಕೂಡ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದರು. ಅಲ್ಲದೆ ಅವರು ಪಕ್ಷಪಾತಿಯಾಗಿದ್ದು, ಬಿಜೆಪಿ ಪರವಾಗಿದ್ದಾರೆ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಾಗರಾಜ್ ಯಾದವ್ ಆರೋಪ ಮಾಡಿದ್ದರು. ಈ ಆರೋಪಗಳನ್ನು ಹೊರಟ್ಟಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಬುಧವಾರ, ಜೆಡಿಎಸ್ ಎಂಎಲ್ಸಿ ಎಸ್.ಎಲ್ ಭೋಜೇಗೌಡ ಈ ವಿಷಯವನ್ನು ಪ್ರಸ್ತಾಪಿಸಿ, ಯಾದವ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ್ದಾರೆ ಎಂದಿದ್ದರು. ಸಭಾಧ್ಯಕ್ಷರ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ಗಂಭೀರವಾಗಿದೆ ಮತ್ತು ಸಭಾಧ್ಯಕ್ಷರು ನೀಡಿದ ನಿಯಮದ ವಿರುದ್ಧ ಮಾತನಾಡುವುದು ಸಂಪೂರ್ಣ ಸಂವಿಧಾನ ಬಾಹಿರವಾಗಿದೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಹೇಳಿದರು. ಕಾಂಗ್ರೆಸ್ ಎಂಎಲ್‌ಸಿಗಳಾದ ಬಿ.ಕೆ. ಹರಿಪ್ರಸಾದ್ ಮತ್ತು ಕೆ.ಎಸ್. ಪುಟ್ಟಣ್ಣಯ್ಯ, ಈ ವಿಷಯವನ್ನು ಸದನದಲ್ಲಿ ಚರ್ಚಿಸುವುದು ನ್ಯಾಯಯುತವಲ್ಲ ಆದರೆ ಹಿರಿಯ ಎಂಎಲ್‌ಸಿಗಳ ಸಮಿತಿಯನ್ನು ರಚಿಸಿ ನಿರ್ಧರಿಸುವ ಅಗತ್ಯವಿದೆ ಎಂದು ವಾದಿಸಿದ್ದಾರೆ.

ಈ ಬಗ್ಗೆ ಮಾಜಿ ಸ್ಪೀಕರ್ ಮತ್ತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಂತಹ ಆರೋಪಗಳ ಬಗ್ಗೆಯೂ ವಿರೋಧ ಪಕ್ಷದ ನಿಲುವು ಏನೂ ಎಂದು ಪ್ರಶ್ನಿಸಿದ್ದಾರೆ. ಆದಾಗೀಯೂ, ಪುಟ್ಟಣ್ಣ, ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ನೇತೃತ್ವದಲ್ಲಿ ಸದನ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ಕೆಲವು ಹಿರಿಯ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸುವಂತೆ ಮತ್ತು ಆ ವಿಷಯದ ಬಗ್ಗೆ ಚರ್ಚಿಸುವಂತೆ ಸಲಹೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular