Saturday, April 19, 2025
Google search engine

Homeರಾಜ್ಯಶಕ್ತಿ ಯೋಜನೆ:ಸಾರಿಗೆ ನಿಗಮದ 4 ನಿಗಮಗಳಿಗೂ ಪ್ರತ್ಯೇಕವಾಗಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಶಕ್ತಿ ಯೋಜನೆ:ಸಾರಿಗೆ ನಿಗಮದ 4 ನಿಗಮಗಳಿಗೂ ಪ್ರತ್ಯೇಕವಾಗಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಘೋಷಿಸಿದ್ದ ಶಕ್ತಿ ಯೋಜನೆಯನ್ನ ಜಾರಿ ಮಾಡಿದ್ದು, ಈ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈ ನಡುವೆ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನ ಸರ್ಕಾರ ಬಿಡುಗಡೆ ಮಾಡಿದೆ.

ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ರೂ. ಆಗಿದ್ದು, ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWRTC) 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ (KKRTC) 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತ್ಯೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular