ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂ sdpi_2025_ ಐಡಿ ಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ತಾಂತ್ರಿಕ ವಿಧಾನದ ಮೂಲಕ ತನಿಖೆ ನಡೆಸಿದಾಗ ಇನ್ ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಮಂಗಳೂರು ಮೂಲದ ಸೌದಿ ಅರೇಬಿಯಾದಲ್ಲಿರುವ ಉಳಾಯಿಬೆಟ್ಟುವಿನ ಅಬ್ದುಲ್ ಖಾದರ್ ನೇಹಾದ್ (27) ಎಂದು ತಿಳಿದು ಬಂದಿದೆ. ಆರೋಪಿತನ ವಿರುದ್ಧ LOC ಹೊರಡಿಸಲಾಗಿತು. ದಿನಾಂಕ 14-12-2025 ರಂದು ಕೇರಳ ರಾಜ್ಯದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಪ್ರಯಾಣ ಮಾಡಿ ಬಂದಿದ್ದ ಆರೋಪಿ ಅಬ್ದುಲ್ ಖಾದರ್ ನೇಹಾದ್ ನನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.



