Wednesday, December 17, 2025
Google search engine

Homeರಾಜ್ಯಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗೆ ಯೆಯ್ಯಾಡಿಯ ಕಾಂಪ್ಲೆಕ್ಸ್ ವೊಂದರ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  ಬೈಕ್ ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ದಿನಾಂಕ : 16-12-2025 ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ @ ತೋಟ ಪೈಸಲ್ ಹಾಗೂ ನಿತೀನ್  ಕುಮಾರ್ ಮೈಸೂರು ಇವರನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರಿಸಲಾಯ್ತು. ಆಗ ಈ ಆರೋಪಿಗಳು ದಿನಾಂಕ: 13-12-2025 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆ ಹೊನ್ನಮ್ಮ ಮಹಾದೇವ ನಾಯ್ಕ್ ಇವರ ಕುತ್ತಿಗೆಯಿಂದ ಚಿನ್ನದ ಚೈನನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾರೆ. ಆರೋಪಿಗಳಿಂದ 1 ಚಿನ್ನದ ಸರ, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್ ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಪೈಸಲ್ @ ತೋಟ ಪೈಸಲ್ ಈತನ ವಿರುದ್ದ ಉಡುಪಿ ಕಾರ್ಕಳ, ಮಣಿಪಾಲ, ಮಂಗಳೂರು, ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೆಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular