Saturday, April 19, 2025
Google search engine

Homeಅಪರಾಧಅಕ್ರಮ ಗಾಂಜಾ ಸಾಗಣೆ: ಓರ್ವನ ಬಂಧನ, ಮತ್ತೊಬ್ಬ ಪರಾರಿ

ಅಕ್ರಮ ಗಾಂಜಾ ಸಾಗಣೆ: ಓರ್ವನ ಬಂಧನ, ಮತ್ತೊಬ್ಬ ಪರಾರಿ

ಹನೂರು: ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸುವಲ್ಲಿ ರಾಮಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ (26)ಬಂಧಿತ ಆರೋಪಿಯಾಗಿದ್ದಾನೆ.

ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ ಎಂಬುವವನು ಕೌದಳ್ಳಿ ಮಾರ್ಗವಾಗಿ ಹನೂರು ಪಟ್ಟಣದತ್ತ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ರವರ ಮಾರ್ಗದರ್ಶನದಲ್ಲಿ ರಾಮಾಪುರ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದು ನಗರ ಗ್ರಾಮದ ಬಳಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಮಾರಾಟಕ್ಕೆ ಸಿದ್ಧವಾಗಿದ್ದ ಒಂದು ಕೆಜಿ 200 ಗ್ರಾಂ ಒಣ ಗಾಂಜಾ ಹಾಗೂ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಪರಮೇಶ್ ಪರಾರಿಯಾಗಿದ್ದು ಈತನ ಪತ್ತೆಗೆ ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಾಳಿಯಲ್ಲಿ ಮುಖ್ಯಪೇದೆ ಸಿದ್ದೇಶ್ ಪೇದೆಗಳಾದ ಲಿಯಾಖತ್ ಅಲಿಖಾನ್, ಮಹೇಂದ್ರ, ಗಿರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular