Sunday, December 21, 2025
Google search engine

Homeಸ್ಥಳೀಯಸಾಲಿಗ್ರಾಮ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ...

ಸಾಲಿಗ್ರಾಮ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ : ಡಾ.ಎಸ್.ಎಂ.ಸಚಿನ್

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 9 ಬೂತ್ ಗಳ ಮೂಲಕ ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಎಸ್.ಎಂ.ಸಚಿನ್ ತಿಳಿಸಿದರು.

ಸಾಲಿಗ್ರಾಮ ತಾಲೂಕಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ, ತಾಲೂಕು ಆರೋಗ್ಯಧಿಕಾರಿ ಡಾ.ನಟರಾಜು ಅವರ ಮಾರ್ಗದರ್ಶನದಲ್ಲಿ ಕೇಂದ್ರದ ವ್ಯಾಪ್ತಿಯಗೆ ಬರುವ 11 ಗ್ರಾಮಗಳ 662 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಪೊಲೀಯೋ ಹನಿ ಹಾಕಿಸುವ ಮೂಲಕ ತಮ್ಮ ಮಕ್ಕಳು ಅಂಗವಿಕಲರು, ಬುದ್ದಿ ಮಾಧ್ಯತೆ ತಪ್ಪಿಸುವ ಸಲುವಾಗಿ ಆರೋಗ್ಯ ಇಲಾಖೆಯು ಈ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದು ಆರೋಗ್ಯ ಇಲಾಖೆ ಅಂಗನವಾಡಿ ಸಿಬ್ಬಂದಿಗಳು ಜತಗೆ ಆಶಾ ಕಾರ್ಯಕರ್ತೆಯರ ಮೂಲಕ
ಬೂತ್ ನಲ್ಲಿ 1 ಒಂದು ದಿನ, 2 ದಿನ ಮನೆ ಮನೆ ತೆರಳಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತಿದ್ದು 5 ವರ್ಷದ ಒಳಗಿನ ಮಕ್ಕಳ ಪೋಷಕರು ಇದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಅರೋಗ್ಯ ನೀರಿಕ್ಷಣಾಧಿಕಾರಿ ಹೇಮೇಶ್, ಪ್ರಯೋಗಶಾಲಾ ಅಧಿಕಾರಿ ಭವ್ಯ,ಸಿಬ್ಬಂದಿ ರೇಖಾ , ಪ್ರವೀಣ್ ಚಿಕ್ಕನಾಯನಹಳ್ಳಿ, ಶಮ್ರಿನ್,ಸಹನಾ, ಸಚಿನ್, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ,ಭಾಗ್ಯ ಭಾಗ್ಯ,ಸಿಬ್ಬಂದಿ ಪವಿತ್ರ, ಆಶಾ ಕಾರ್ಯಕರ್ತೆ ಸುಮತಿ ರಮೇಶ್, ಹಾರಂಗಿ ಇಲಾಖೆಯ ಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.


RELATED ARTICLES
- Advertisment -
Google search engine

Most Popular