ಮಂಗಳೂರು :ನಿರ್ಲಕ್ಷ್ಯ ಚಾಲನೆಯಿಂದಾಗಿ ಖಾಸಗಿ ಆಂಬುಲೆನ್ಸ್ ಕುಳಾಯಿ ಸಮೀಪ ಪಾದಚಾರಿಯೊಬ್ಬರಿಗೆ ಡಿಕ್ಕಿಹೊಡೆದ ಕಾರಣ ಅಪರಿಚಿತ ವ್ಯಕ್ತಿಯ ಹಣೆ ಹಾಗೂ ತಲೆಗೆ ಗಂಭೀರ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿಸಿರುವ ಬಗ್ಗೆ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಅಪರಿಚಿತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆ ಬೈಕಂಪಾಡಿ ದೂ.ಸಂಖ್ಯೆ:0824-2220833, ಪೊಲೀಸ್ ನಿರೀಕ್ಷಕರು- 9480802349 ಅಥವಾ ಸಿಟಿ ಕಂಟ್ರೋಲ್ ರೂಮ್-0824-2220800 ಅನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.