ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ‘ಪ್ರಧಾನಿ’ಯಾಗಿ ಮಾಡೇ ಮಾಡ್ತೀವಿ, ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದನ್ನು ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ(ಡಿ.23) ಹೇಳಿದ್ದಾರೆ.
ಈ ಬಗ್ಗೆ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಹೆಚ್ಚಳ ಕುರಿತು ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದಿದ್ದು, ಆಕೆ ಇಂದಿರಾ ಗಾಂಧಿ ಮೊಮ್ಮಗಳು. ಅವರು ಪಾಕಿಸ್ತಾನಕ್ಕೆ ತುಂಬಾ ಹಾನಿಯನ್ನುಂಟುಮಾಡಿದ್ದಾರೆ. ಆ ಗಾಯಗಳು ಇನ್ನೂ ವಾಸಿಯಾಗಿಲ್ಲ. ಪ್ರಧಾನಿಯಾಗಿ ಮಾಡಿದರೆ ಆಕೆ ಹೇಗೆ ಪ್ರತೀಕಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ನೋಡಿ, ನಿಮಗೆ ಆ ಎದೆಗಾರಿಕೆ ಇಲ್ಲ ಎಂದಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಹತ್ಯೆಯ ನಂತರ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸಬೇಕೆಂದು ಕೇಂದ್ರವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಇತ್ತೀಚಿಗೆ ಒತ್ತಾಯಿಸಿದ್ದು, ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಕ್ರೂರ ಹತ್ಯೆಯನ್ನು ಖಂಡಿಸಿದ್ದಾರೆ.



