ಗುಂಡ್ಲುಪೇಟೆ: ಆ.20ರಂದು ಚಾಮರಾಜನಗರಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಆಶಯಗಳ ಉಳುವಿಗಾಗಿ ‘ಭೀಮ ಸಂಕಲ್ಪ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳು ಜೊತೆಗೂಡಿ ಚಾಮರಾಜನಗರದಲ್ಲಿ ಸಂವಿಧಾನ ಆಶಯಗಳ ಉಳಿವಿಗಾಗಿ ಭೀಮ ಸಂಕಲ್ಪ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೂಳಿ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್ ಮತ್ತು ದರ್ಶನ್ ಧ್ರುವನಾರಯಣ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದಾಗ ಸಂವಿಧಾನ ಅಪಾಯದಲ್ಲಿರುವುದು ಗೋಚರಿಸುತ್ತಿದೆ. ಕೋಮುವಾದಿಗಳು ವ್ಯವಸ್ಥಿತವಗಿ ಸಂವಿಧಾನವನ್ನು ಅಂತ್ಯಕ್ಕೆ ಕೊಂಡೊಯ್ಯಲು ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ. ಅಲ್ಲದೇ ರಾಜ್ಯದ ಘಟನೆಗಳು ಸಮಾಜ ತಲೆ ತಗ್ಗಿಸುವಂತೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಇಂತಹ ಬೆಳವಣಿಗೆ ಖಂಡಿಸಿ ಪ್ರತಿಯೊಬ್ಬರು ಜಾಗೃತರಾಗಬೇಕಿದೆ ಎಂದು ತಿಳಿಸಿದರು.
ಮುಖಂಡರಾದ ಸುಭಾಷ್ ಮಾಡ್ರಹಳ್ಳಿ, ದೊಡ್ಡರಾಯಪೇಟೆ ಸಿದ್ದರಾಜು, ಆರ್.ಸೋಮಣ್ಣ, ಬಂಗಾರಸ್ವಾಮಿ, ಹುಣಸಿನಪುರ ನಂಜುಂಡಸ್ವಾಮಿ, ನಾಗಣ್ಣ, ಬಸವಣ್ಣ, ಕೆ.ಎಂ.ಮನಸ್, ರಂಗಸ್ವಾಮಿ, ನಂಜುಂಡಸ್ವಾಮಿ, ರಾಮ ಸಮುದ್ರಸಿದ್ದರಾಜು, ಕೃಷ್ಣಮೂರ್ತಿ, ನಾಗಶೇಖರ್, ಯೋಗೇಶ್ ಚಿಕ್ಕತುಪ್ಪೂರು ಹಾಜರಿದ್ದರು.