Friday, December 26, 2025
Google search engine

Homeರಾಜಕೀಯಈಗಲೇ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿ.ವೈ.ವಿಜಯೇಂದ್ರ

ಈಗಲೇ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿ.ವೈ.ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದು, ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಳೆ ಅಥವಾ 2028 ರಲ್ಲಿ ಚುನಾವಣೆ ನಡೆದರೆ, ಬಿಜೆಪಿ ಸುಮಾರು 130 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವಂತವಾಗಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಕರ್ನಾಟಕವು ಮುಂದೊಂದು ದಿನ ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರ ಕೋಟೆ ಆಗಲಿದೆ ಎಂಬ ದೂರದೃಷ್ಟಿತ್ವ ವಾಜಪೇಯಿ ಅವರಲ್ಲಿತ್ತು. ಕಾರ್ಯಕರ್ತರ ಕುರಿತು ಅದಮ್ಯ ವಿಶ್ವಾಸ ಅವರದಾಗಿತ್ತು. ಸೋಲಿನಿಂದ ಅಂಜುವ ಪ್ರಶ್ನೆಯೇ ಇಲ್ಲ ಎಂಬ ಮಾತನ್ನು ವಾಜಪೇಯಿ ಅವರು ಹೇಳುತ್ತಿದ್ದರು. ಪಕ್ಷವನ್ನು ದೃಢವಾಗಿ ಕಟ್ಟುವ ಆತ್ಮವಿಶ್ವಾಸವನ್ನು ಕಾರ್ಯಕರ್ತರಲ್ಲಿ ಅವರು ತುಂಬಿದ್ದರು ಎಂದು ಹೇಳಿದರು.

ಇನ್ನೂ ವಾಜಪೇಯಿ ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವ ಅರ್ಥ ಮಾಡಿಕೊಳ್ಳಿ. ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ರಾಜ್ಯದ ಪಟ್ಟಣ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದರು. ಇವಿಎಂ ಇರಲಿ, ಬ್ಯಾಲೆಟ್ ಇರಲಿ. ಕಾಂಗ್ರೆಸ್ಸಿನ ಹಣೆಬರಹ ಬದಲಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ತನ್ನ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ, ಮತ್ತು ಅದು ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶಗಳಿಂದ ಸ್ಪಷ್ಟವಾಗಿದೆ ಎಂದರು.

ನಮ್ಮ ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷದಲ್ಲಿ ಕುಳಿತಿದ್ದೇವೆ. ನಾವ್ಯಾರೂ ಆತಂಕ ಪಡಬೇಕಿಲ್ಲ. ರಾಜ್ಯದ ಜನವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಕ್ರೋಶ ಹೆಚ್ಚಾಗಿದ್ದು, ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಚುನಾವಣೆ ನಾಳೆಯೇ ನಡೆಯಲಿ ಅಥವಾ ನಿಗದಿತ 2028ರಲ್ಲೇ ನಡೆಯಲಿ. ಯಾವಾಗ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular