ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2024ರಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ರೇವಣ್ಣ ಅವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಆರೋಪವನ್ನು ವಿಶೇಷ ನ್ಯಾಯಾಲಯವು ಕೈಬಿಟ್ಟಿದೆ.
ಈ ಬಗ್ಗೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೆ.ಎನ್. ಶಿವಕುಮಾರ್ ಅವರು ನಿರಾಕರಿಸಿದ್ದು, ಹೆಚ್.ಡಿ. ರೇವಣ್ಣ ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದ್ದಾರೆ.
ಇನ್ನೂ ಪ್ರಕರಣದ ಮೊದಲ ಆರೋಪಿಯಾಗಿರುವ ಹೆಚ್.ಡಿ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಲಾಗಿತ್ತು ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಹೆಚ್.ಡಿ. ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟಿದೆ.



