Tuesday, December 30, 2025
Google search engine

Homeಅಪರಾಧಮದ್ಯಪಾನದ ಅಮಲಿನಲ್ಲಿ ಟ್ರಾಫಿಕ್ ಪೊಲೀಸರಿಗೆ ಅವಾಜ್ ಎಫ್‌ಐಆರ್ ದಾಖಲು

ಮದ್ಯಪಾನದ ಅಮಲಿನಲ್ಲಿ ಟ್ರಾಫಿಕ್ ಪೊಲೀಸರಿಗೆ ಅವಾಜ್ ಎಫ್‌ಐಆರ್ ದಾಖಲು

ದೇವನಹಳ್ಳಿ : ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿದ್ದ ಯುವಕರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಬೈಪಾಸ್​​​ನಲ್ಲಿ ನೆನ್ನೆ (ಡಿ.29) ರಾತ್ರಿ ನಡೆದಿದೆ. ಡಿಡಿ ಕೇಸ್ ಚೇಕಿಂಗ್ (ಮದ್ಯಪಾನ ಮಾಡಿ ವಾಹನ ಚಲಾಯಿಸುವುದು) ವೇಳೆ ಅವಾಜ್ ಹಾಕಿದ್ದ ಈ ಯುವಕರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಕಾರು ಚಾಲಕನನ್ನು ಬ್ರೆತ್ ಅನಾಲೈಸರ್​​ಗೆ ಊದಲು ಹೇಳಿದ್ದಾರೆ. ಆದರೆ ಇದಕ್ಕೆ ಚಾಲಕ ನಿರಾಕರಿಸಿದ್ದಾನೆ. ಈ ವಿಚಾರವಾಗಿ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿದ್ದಾನೆ. ಕಾರಿನಲ್ಲಿದ್ದ ಇತರರು ಕೂಡ ಪೊಲೀಸರನ್ನ‌ ಎಳೆದಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ‌ ಮಾಡಿದ್ದಾರೆ ಎಂದು ಹೇಳಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ‌ ಪ್ರಕರಣ ದಾಖಲಿಸಲಾಗಿದೆ. ಎ1 ಕಿಶೋರ್, ಎ2 ಪ್ರತಾಪ್, ಎ3 ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular