ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಮಾರು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ. ದಿನಾಂಕ 29/12/2025 ರಂದು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ, ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ ಒಟ್ಟು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ 425 ಗ್ರಾಂ ತೂಕದ ಗಾಂಜಾ ಮತ್ತು ನಗದು ರೂ 650/-, 1 ಮೊಬೈಲ್ ಫೋನ್ ಹಾಗೂ ಇತರೆ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಮೂಲತಃ ಉತ್ತರ ಪ್ರದೇಶ ರಾಜ್ಯದ ಹರ್ದೊಯಿ ಜಿಲ್ಲೆಯ ಜೂರಿ ಚಂದ್ರಾಪುರ್ ವಾಸಿಯಾದ ರಾಜ್ ಪಾಲ್ ಎಂಬಾತನು ಉತ್ತರಪ್ರದೇಶದ ತನ್ನ ಊರಿನಿಂದ ತೆಗೆದುಕೊಂಡು ಬಂದು ಹಣಕ್ಕಾಗಿ ಬೇರೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಿನಾಂಕ 30./12/2025 ರಂದು ಬೆಳಗ್ಗಿನ ಜಾವ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ, ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ವಶಕ್ಕೆ ಪಡೆದು ಗಾಂಜಾ ಮತ್ತು ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ 5.5 278/2025 500 8(c), 20(b) 2.2.2.2 1985 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.



