Thursday, January 8, 2026
Google search engine

Homeರಾಜ್ಯಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳ ಕಲ್ಲು ತೂರಾಟ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳ ಕಲ್ಲು ತೂರಾಟ

ಬೆಂಗಳೂರು : ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆ ವ್ಯಾಪ್ತಿಯಲ್ಲಿ ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ.

ಓಂ ಶಕ್ತಿ ಅಧ್ಯಕ್ಷ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ FIR ದಾಖಲು ಮಾಡಲಾಗಿದ್ದು, ಮೂರ್ನಾಲ್ಕು ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದು, ಓರ್ವ ಹೆಣ್ಣು ಮಗಳ ತಲೆಗೆ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೆ.ಜೆ.ನಗರದ ವಿ.ಎಸ್. ಗಾರ್ಡನ್‌ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ವರದರಾಜು ಎಂಬವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿವೆ ಜತೆಗೆ ಇಬ್ಬರು ಮಹಿಳೆಯರ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಈ ಘಟನೆಯಿಂದ ಸಿಡಿದೆದ್ದಿರುವ ಓಂ ಶಕ್ತಿ ಮಾಲಾಧಾರಿಗಳು ಮತ್ತು ನೂರಾರು ಸ್ಥಳೀಯರು ಜೆ.ಜೆ ನಗರ ಠಾಣೆ ಮುಂದೆ ಜಮಾಯಿಸಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಮುಂದೆ ಹಾಗೂ ಜೆ.ಜೆ ನಗರ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಸೂಚಿಸಿದರು. ಪೊಲೀಸರ ಸೂಚನೆಗೆ ಜಗ್ಗದೇ ನೂರಾರು ಮಂದಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ, ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಮತ್ತೊಂದೆಡೆ ಠಾಣೆ ಮುಂಭಾಗ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಓಂಶಕ್ತಿ ಮಾಲಾಧಾರಿಗಳಿಗೆ ಪ್ರತಿಭಟನೆ ಕೈ ಬಿಡುವಂತೆ ಮನವೊಲಿಕೆ ಮಾಡಿದರು.

ಇನ್ನೂ ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅಪ್ರಾಪ್ತ ಬಾಲಕರು ಕಲ್ಲು ತೂರಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಕೂಡಲೆ ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಸಂಬಂಧ ಜೆ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular