Wednesday, January 7, 2026
Google search engine

Homeರಾಜ್ಯಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ : ಬಾಲಪಾತಕಿಗಳ ಬಂಧನ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ : ಬಾಲಪಾತಕಿಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಚಾಮರಾಜಪೇಟೆ ಸಮೀಪದ ಜೆಜೆಆರ್ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿ, ನಾಲ್ಕೈದು ಜನ ಚಿಕ್ಕ ಹುಡುಗರು, 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಿನ್ನೆ ರಾತ್ರಿ ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದರು. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿತ್ತು. ಇದೀಗ ಜೆಜೆಆರ್‌ ನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular