ಮಂಡ್ಯ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ವತಿಯಿಂದ ಅರ್ಥಪೂರ್ಣವಾಗಿ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.
ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್. ಸುರೇಶ್ ನೇತೃತ್ವದಲ್ಲಿ ಮಂಡ್ಯ ವಿದ್ಯಾಗಣಪತಿ ದೇವಸ್ಥಾನದಲ್ಲಿ ಸಿದ್ದರಾಮಯ್ಯ ಹೆಸರಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಮಾನಿಗಳು ಜನ್ಮದಿನ ಆಚರಣೆ ಮಾಡಿದ್ದಾರೆ.
ಬಳಿಕ ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡಿದ್ದಾರೆ.
ಎಂ.ಎಲ್. ಸುರೇಶ್ ಮಾತನಾಡಿ, ದೇವರು ಅವರಿಗೆ ಆಯಸ್ಸು ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಲು ಜನರು ಆಶೀರ್ವಾದ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜನಪ್ರಿಯ ಯೋಜನೆಯನ್ನು ಜಾರಿ ಮಾಡಿದ್ದಾರೆ. ಜನರು ನೆಮ್ಮದಿಯಿಂದ ಬದಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ರಾಜ್ಯವನ್ನು ಒಳ್ಳೆಯ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲಿ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದಾರೆ.
