ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನ ಆಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



