ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ, ವಿಷ ಕುಡಿಸಿ ಕೊಲ್ಲಲಾಗಿದೆ. ಗುರುವಾರ (ಜ8) ಸುನಾಮಗಂಜ್ ಜಿಲ್ಲೆಯಲ್ಲಿ ಜಾಯ್ ಮಹಾಪಾತ್ರೋ ಎಂಬ ಹಿಂದೂ ಯವಕನ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿಗಳು, ಥಳಿಸಿ ಆತನಿಗೆ ವಿಷ ಕುಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಪಾತ್ರೋ ಕುಟುಂಬಸ್ಥರು, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ, ವಿಷಪ್ರಾಶನ ಮಾಡಿದ್ದಾರೆ. ನಂತರ ಆತನನ್ನು ಸಿಲ್ಹೆಟ್ ಎಂಎಜಿ ಉಸ್ಮಾನಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಮಹಾಪಾತ್ರೋ ನಿಧನ ಹೊಂದಿದ್ದಾನೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
2024ರ ದಂಗೆಯಾಗಿ ಶೇಖ್ ಹಸೀನಾ ಸರ್ಕಾರ ಪಥನಗೊಂಡ ಬಳಿಕ ಬಾಂಗ್ಲಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಹೆಚ್ಚಾಗುತ್ತಿದೆ. ಇತ್ತೀಚೆಗೆ ಧರ್ಮನಿಂದೆಯ ಆರೋಪದ ಮೇಲೆ ದೀಪು ಚಂದ್ರ ದಾಸ್ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಪೊಲೀಸರು ಹತ್ಯೆ ಆರೋಪಿಗಳನ್ನು ಬಂಧಿಸಿದ್ದಾರೆ.
ದುಷ್ಕರ್ಮಿಗಳ ಗುಂಪು ಆತನ ಮೇಲೆ ಹಲ್ಲೆ ಮಾಡಿ ಕೊಂದು, ಅವನ ಮೃತದೇಹವನ್ನು ಮರಕ್ಕೆ ನೇತುಹಾಕಿ, ಬೆಂಕಿ ಹಚ್ಚಿತ್ತು. ಅವನ ಹಲವಾರು ಸಹೋದ್ಯೋಗಿಗಳು ಹಲ್ಲೆಯಲ್ಲಿ ಭಾಗಿಯಾಗಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.



