ಬೆಂಗಳೂರು : ಮಕರ ಸಂಕ್ರಾಂತಿ ಹಿನ್ನೆಲೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಸಂಜೆ 5 ಗಂಟೆ 19 ನಿಮಿಷಕ್ಕೆ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು.
ನಂದಿ ಕೊಂಬಿನ ಮೂಲಕ ಶಿವನ ಗರ್ಭಗೃಹ ಪ್ರವೇಶಿಸಿದ ಸೂರ್ಯರಶ್ಮಿ, ಸುಮಾರು 2 ನಿಮಿಷ ಶಿವಲಿಂಗವನ್ನು ಸ್ಪರ್ಶಿಸಿದೆ. ದೇವರ ದರ್ಶನಕ್ಕೆ ಸುಮಾರು 200 ಮೀಟರ್ನಷ್ಟು ಉದ್ದದ ಸರತಿ ಸಾಲಲ್ಲಿ ಭಕ್ತರು ನಿಂತಿದ್ದು, ದೇವಸ್ಥಾನದ ಆವರಣದಲ್ಲಿ LED ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಮೋಡ ಕವಿದ ವಾತಾವರಣದಿಂದಾಗಿ 2025ರಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ.



