Saturday, January 17, 2026
Google search engine

Homeಅಪರಾಧರಾಸಾಯನಿಕ ಬಳಸಿ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು‌ ತಯಾರಿಸುತ್ತಿದ್ದವರ ಬಂಧನ

ರಾಸಾಯನಿಕ ಬಳಸಿ ಹಲವು ಬ್ರ್ಯಾಂಡ್ ಕಂಪನಿಗಳ ನಕಲಿ ಹಾಲು‌ ತಯಾರಿಸುತ್ತಿದ್ದವರ ಬಂಧನ

ಕೋಲಾರ : ಕೆಎಂಎಫ್ ನಂದಿನಿ ಸೇರಿ ಹಲವು ಬ್ರ್ಯಾಂಡ್‌ ಕಂಪನಿಗಳ ಕಲಬೆರಕೆ ಹಾಲನ್ನು ತಯಾರಿಸುತ್ತಿದ್ದ 8 ಜನರನ್ನು ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿ, ಕಲಬೆರಕೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆಂಧ್ರ ಮೂಲದ ವೆಂಕಟೇಶಪ್ಪ(50), ಬಾಲಾಜಿ(35), ದಿಲೀಪ್(25), ಬಾಲರಾಜ್(33), ಮನೋಹರ್(28), ಕಾರ್ತಿಕ್(29), ಮನೋಜ್(22) ಮತ್ತು ಮಂಜುನಾಥ್(55) ಬಂಧಿತ ಆರೋಪಿಗಳಾಗಿದ್ದು, ಕೆಜಿಎಫ್ ನಗರದ ಬಳ್ಳಗೆರೆ ಹೊರವಲಯದ ಗ್ರಾಮದ ತೋಟದ ಮನೆಯಲ್ಲಿ ಪಾಮ್ ಆಯಿಲ್ ಹಾಗೂ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿಕೊಂಡು ಅಕ್ರಮವಾಗಿ ನಕಲಿ ಹಾಲು ತಯಾರಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅಂಡರ್‌ಸನ್ ಪೇಟೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಒಂದು ಲೀಟರ್ ಮಿಶ್ರಣದಿಂದ 20 ಲೀಟರ್ ಹಾಲು ತಯಾರು ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಹೀಗೆ ತಯಾರು ಮಾಡಿದ ಹಾಲನ್ನು ಬೇತಮಂಗಲ ಸೇರಿದಂತೆ ಇತರೆ ಪ್ರದೇಶದ ಡೈರಿಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು ನಂದಿನಿ ಸೇರಿದಂತೆ ವಿವಿಧ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ಹಾಲನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದರು. ಇನ್ನು ದಾಳಿ ವೇಳೆ 500 ಗ್ರಾಂ ನಂದಿನ ಹಾಲಿನ ಪುಡಿಯ 350 ಪಾಕೆಟ್, ಒಂದು ಕೆಜಿ ತೂಕದ 40 ಪಾಕೆಟ್, ಮಿಲೆಟ್ ಮಿಲ್ಕ್ ಲಡ್ಡು 12 ಪಾಕೆಟ್, 500 ಗ್ರಾಂ ಸಾಮರ್ಥ್ಯದ 7 ಬೆಲ್ಲದ ಪಾಕೆಟ್, 900 ಪಾಕೆಟ್ ಪಾಮ್ ಆಯಿಲ್, ಎರಡು ಮಿಕ್ಸಿ, 38 ಲೀಟರ್ ಸಾಮರ್ಥ್ಯದ 51 ಹಾಲಿನ ಕ್ಯಾನ್, ಹಾಲು ಸರಬರಾಜು ಮಾಡುತ್ತಿದ್ದ ಎರಡು ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನೂ ನಂದಿನಿ ಸಂಸ್ಥೆ ಹೊರಗಡೆ ಮಾರಾಟ ಮಾಡದ ಹಾಲಿನ ಪೌಡರ್ ಹಾಗೂ ಅಂಗನವಾಡಿ ಕೇಂದ್ರಕ್ಕೆ ನೀಡಲಾಗುವ ಪೌಷ್ಟಿಕ ಆಹಾರದ ಪಾಕೆಟ್‌ಗಳು ಆರೋಪಿಗಳ ಬಳಿಗೆ ಹೇಗೆ ಬಂದವು, ಇದರಲ್ಲಿ ಯಾರಾದರೂ ಸರ್ಕಾರಿ ನೌಕರರು ಶಾಮಿಲಾಗಿದ್ದಾರೆಯೇ ಎಂಬುದರ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಕೆಜಿಎಫ್ ಎಸ್​ಪಿ ಶಿವಾಂಶು ರಜಪೂತ್​​​ ಹೇಳಿದ್ದಾರೆ.

ಈ ವೇಳೆ ಡಿವೈಎಸ್‌ಪಿ ಲಕ್ಷ್ಮಯ್ಯ, ಸರ್ಕಲ್ ಇನ್‌ಸ್ಪೆಕ್ಟರ್‌ ಪಿಎಂ ನವೀನ್, ಮಾರ್ಕೊಂಡಯ್ಯ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular