ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಅಂಗಳದಲ್ಲಿ ಪವರ್ ಪಾಲಿಟಿಕ್ಸ್ ಮಾಡ್ತಿದ್ದಾರೆ. ಈ ಮಹತ್ವದ ಬೆಳವಣಿಗೆ ನಡುವೆ ಸಚಿವ ಜಮೀರ್ ಅಹ್ಮದ್ ಖಾನ್ ಶಾಕಿಂಗ್ ಹೇಳಿಕೆ ನೀಡಿದ್ದು, ಈ ಕುರಿತು ಹುಬ್ಬಳ್ಳಿಯಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತಾಡಿದ ಜಮೀರ್ ಖಾನ್, ಹೈಕಮಾಂಡ್ ನವರು ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಇನ್ನೂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಅವರು ದೆಹಲಿಗೆ ಹೋಗೋದು ಸಹಜ ಎಂದಿದ್ದಾರೆ. ಅಲ್ಲದೇ ನಾನು ಅಥವಾ ಯಾರೇ ನಾಯಕರು ದೆಹಲಿಗೆ ಹೋದರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೀವಿ ಎಂದ ಜಮೀರ್, ಹೈಕಮಾಂಡ್ ನವರು ಬೀದಿ ದಾಸಯ್ಯ ನನ್ನು ಸಿಎಂ ಮಾಡಿದ್ರು ನಾವು ಒಪ್ಪಿಕೊಳ್ಳುತ್ತೇವೆ ಎನ್ನುವ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಇನ್ನೂ ಜಮೀರ್ ಮಾತು ಇದೀಗ ಹೊಸ ಚರ್ಚೆಗೆ ಕಾರಣವಾಗಿದ್ದು, ನವೆಂಬರ್ ಕ್ರಾಂತಿ ಮುಗೀತು. ಇಲ್ಲಿ ಕ್ರಾಂತಿನೂ ಇಲ್ಲ ಬ್ರಾಂತಿನೂ ಇಲ್ಲ. 2028ರ ವರೆಗೆ ಸಿಎಂ ಕುರ್ಚಿ ಖಾಲಿಯಿಲ್ಲ. ಅಲ್ಲಿವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಹೈಕಮಾಂಡ್ ನಿಂದ ಮಾತ್ರ ಸಾಧ್ಯ. ಸಿಎಂ ಬದಲಾವಣೆ ನಮ್ಮ ಕೈಯಲ್ಲಿಲ್ಲ. ಹೈಕಮಾಂಡ್ ಯಾರನ್ನ ಮಾಡ್ತಾರೆ ನಾವು ಒಪ್ಪಿಕೊಳ್ಳುತ್ತೇವೆ ಎಂದಿದ್ದಾರೆ.
ಸಂಪುಟ ಪುನಾರಚನೆ ಬಗ್ಗೆ ಮಾತಾಡಿದ ಜಮೀರ್, ಮಂತ್ರಿಯಾಗಬೇಕು ಎನ್ನುವ ಆಸೆ ಬಹಳ ಜನರಿಗೆ ಇದ್ದೆ ಇರುತ್ತೆ. ಈ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಹುಬ್ಬಳ್ಳಿಯಲ್ಲಿ ಜಮೀರ್ ಅಹಮದ್ ಹೇಳಿಕೆ ನೀಡಿದ್ದಾರೆ.



