Saturday, January 17, 2026
Google search engine

Homeಕ್ರೀಡೆಟಾಸ್ ಗೆದ್ದ RCB; ಮೊದಲು ಬ್ಯಾಟಿಂಗ್‌ಗೆ ಡೆಲ್ಲಿ ಕ್ಯಾಪಿಟಲ್ಸ್

ಟಾಸ್ ಗೆದ್ದ RCB; ಮೊದಲು ಬ್ಯಾಟಿಂಗ್‌ಗೆ ಡೆಲ್ಲಿ ಕ್ಯಾಪಿಟಲ್ಸ್

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ ಆಡಿದ ಮೂರು ಪಂದ್ಯಗಳಲ್ಲಿ 2 ರಲ್ಲಿ ಸೋತು, 1 ರಲ್ಲಿ ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್‌ ಮಾಡಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವ ಕಾರಣ, ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚು ನೆರವು ಸಿಗಲಿದೆ. ಹೀಗಾಗಿ ಸ್ಮೃತಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ ಆರ್​ಸಿಬಿ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್ (ದಯಾಲನ್ ಹೇಮಲತಾ ಬದಲಿಗೆ), ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್,ಪ್ರೇಮಾ ರಾವತ್ (ಅರುಂಧತಿ ರೆಡ್ಡಿ ಬದಲಿಗೆ), ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ (ಲಿನ್ಸೆ ಸ್ಮಿತ್ ಬದಲಿಗೆ), ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್ (ಚಿನೆಲ್ ಹೆನ್ರಿ ಬದಲಿಗೆ).

RELATED ARTICLES
- Advertisment -
Google search engine

Most Popular