ಗುಂಡ್ಲುಪೇಟೆ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗೆ ಶಾಶ್ವತವಾಗಿ ಉಳಿಯುವುದು ವಿದ್ಯಾರ್ಥಿಗಳಿಗೆ ನೀಡಿದ ಜ್ಞಾನಾರ್ಜನೆ ಮಾತ್ರ ಎಂದು ಮುಖ್ಯ ಶಿಕ್ಷಕ ಮಹದೇವಯ್ಯ ಅಭಿಪ್ರಾಯ ಪಟ್ಟರು.
ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವರ್ಗಾವಣೆಗೊಂಡ ಎಲ್ಲಾ ಶಿಕ್ಷಕರಿಗೂ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಾವು ಓದಿ ಬೆಳೆದ ಶಾಲೆ ಹಾಗೂ ಶಿಕ್ಷಕರನ್ನು ಮರೆಯದೆ ನೆನಪಿನ ಕಾಣಿಕೆ ನೀಡಿ ಗೌರವಿಸುವ ಕೆಲಸ ಮಾಡಿರುವುದು ಶಾಘ್ಲನೀಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇತ್ತೀಚೆಗೆ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿವೆ. ಆದ್ದರಿಂದ ಶಿಕ್ಷಣದಿಂದ ಯಾರು ವಂಚಿತರಾಗದೆ ದೊರಕುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಮಾದರಿ ವಿದ್ಯಾರ್ಥಿಗಳಾಗಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಗುರುಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ನಂಜುಂಡಸ್ವಾಮಿ, ಶಿವಣ್ಣ, ಮಹೇಶ್, ಮಹದೇವಮೂರ್ತಿ, ನಾಗರಾಜಪ್ಪ, ಮಲ್ಲಿಕಾರ್ಜುನ, ಭಾಗ್ಯಮ್ಮ, ಶಿವಮ್ಮ, ನಾಗಮ್ಮ ಸೇರಿದಂತೆ ಶಾಲೆಯ ಹಳೆ ವಿದ್ಯಾರ್ಥಿಗಳು ಮತ್ತು ಮಕ್ಕಳು ಹಾಜರಿದ್ದರು.