ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಬಳಿಕ ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಮ್ಯಾಚ್‌ಗಳು ನಡೆಯುವುದು ಡೌಟು ಎನ್ನಲಾಗುತ್ತಿತ್ತು. ಆದರೆ ಕರ್ನಾಟಕ ಗೃಹ ಇಲಾಖೆಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ.
ಆ ಮೂಲಕ ಆರ್ಸಿಬಿ ಅಭಿಮಾನಿಗಳಿಗೆ ಸರ್ಕಾರ ಗುಡ್ನ್ಯೂಸ್ ನೀಡಿದೆ. ಎನ್. ಕುನ್ನಾ ಸಮಿತಿಯು ನೀಡಿದ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನು ಕೆಎಸ್‌ಸಿಎ ಪೂರೈಸಿದ ನಂತರವಷ್ಟೇ ಅಂತಿಮ ಅನುಮತಿ ನೀಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿತ್ತು. ಈ ಬೆನ್ನಲ್ಲೇ ಕೆಎಸ್‌ಸಿಎ ಈಗಾಗಲೇ ಈ ಷರತ್ತುಗಳನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದು, ಹೀಗಾಗಿ ಇದೀಗ ಗೃಹ ಇಲಾಖೆ ಪಂದ್ಯಗಳ ಆಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ.



