Monday, January 19, 2026
Google search engine

Homeರಾಜ್ಯಹೈಕೋರ್ಟ್ ನ್ಯಾಯಮೂರ್ತಿ ಮುರಳೀಧರ ಪೈಗೆ ಮಂಗಳೂರು ವಕೀಲರ ಸಂಘದಿಂದ ಅಭಿನಂದನೆ

ಹೈಕೋರ್ಟ್ ನ್ಯಾಯಮೂರ್ತಿ ಮುರಳೀಧರ ಪೈಗೆ ಮಂಗಳೂರು ವಕೀಲರ ಸಂಘದಿಂದ ಅಭಿನಂದನೆ

ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಲೋಕಾಯುಕ್ತ ನ್ಯಾಯಾಧೀಶರಾಗಿ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಸುಮಾರು ಐದು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ರಿಜಿಸ್ಟರ್ ಜನರಲ್ ಆಗಿ ನೇಮಕಗೊಂಡು ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಪ್ರಸ್ತುತ ಧಾರವಾಡ ಹೈಕೋರ್ಟ್ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿ ಮುರಳಿಧರ್ ಪೈ ಯವರನ್ನು ಮಂಗಳೂರು ವಕೀಲರ ಸಂಘದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೌರವವನ್ನು ಸ್ವೀಕರಿಸಿ ಮಾತನಾಡಿದ ನ್ಯಾಯಮೂರ್ತಿಗಳು, ತನ್ನ ಹುಟ್ಟೂರು ಕಾರ್ಕಳವಾದರೂ ನಾನು ನ್ಯಾಯಾಧೀಶನಾಗಿ ಹೆಚ್ಚಿನ ಸೇವೆಯನ್ನು ಮಂಗಳೂರಿನಲ್ಲಿ ಸಲ್ಲಿಸಿದ ಕಾರಣ ಮಂಗಳೂರು ನನಗೆ ತವರು ಮನೆ ಇದ್ದಂತೆ. ಇಲ್ಲಿನ ಪ್ರತಿಭಾವಂತ ವಕೀಲರ ನಡುವೆ ಸೇವೆ ಸಲ್ಲಿಸಿದ ಅನುಭವ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿದೆ ಎಂದರು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ವಿಧಾನ ಪ್ರಶಸ್ತಿ ಸದಸ್ಯ ಐವನ್ ಡಿಸೋಜಾ ಅವರು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಸವರಾಜ್ ನೆರವೇರಿಸಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ಉಪಾಧ್ಯಕ್ಷ ಸುಜಿತ್ ಕುಮಾರ್, ಜೊತೆ ಕಾರ್ಯದರ್ಶಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯರಾದ ಬಿ ಇಬ್ರಾಹಿಂ, ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ರಾಜ್ಯ ವಕೀಲರ ಪರಿಷತ್ ನ ಮಾಜಿ ಉಪಾಧ್ಯಕ್ಷರಾದ ಟಿ ಎನ್ ಪೂಜಾರಿ, ಸಂಘದ ಮಾಜಿ ಅಧ್ಯಕ್ಷರಾದ ಎಂ ಆರ್ ಬಳ್ಳಾಲ್, ಅಶೋಕ ಅರಿಗ, ಶಂಭು ಶರ್ಮ, ಪೃಥ್ವಿರಾಜ್ ರೈ, ನರಸಿಂಹ ಹೆಗಡೆ, ಇತರ ಹಿರಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular