Wednesday, January 21, 2026
Google search engine

Homeಅಪರಾಧ106 ಕಿಲೋ ಗ್ರಾಂ ಗಾಂಜಾ ಜೊತೆಗೆ ಇಬ್ಬರ ಬಂಧನ

106 ಕಿಲೋ ಗ್ರಾಂ ಗಾಂಜಾ ಜೊತೆಗೆ ಇಬ್ಬರ ಬಂಧನ

ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ 106 ಕೆಜಿ ಗಾಂಜಾ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತರು.
ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಕಾರು ಹಾಗೂ ಗೂಡ್ಸ್ ವಾಹನವನ್ನು ತಪಾಸಣೆಗಾಗಿ ನಿಲ್ಲಿಸಿದ್ದಾರೆ. ಕಾರಿನ ಚಾಲಕನಲ್ಲಿ ವಿಚಾರಿಸಿದಾಗ ಆತ ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿರುತ್ತದೆ. ಆ ಬಳಿಕ ಗೂಡ್ಸ್ ವಾಹನದ ಚಾಲಕನ ಬಳಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ಆತನ ವಾಹನ ಪರಿಶೀಲಿಸಿದಾಗ ಸದ್ರಿ ವಾಹನದಲ್ಲಿ 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿರುತ್ತದೆ. ಇದರ ಮೌಲ್ಯ ರೂ.53,03,000/- ಆಗಬಹುದು. ಈ ಬಗ್ಗೆ ಚಾಲಕನಲ್ಲಿ ವಿಚಾರಿಸಲಾಗಿ ಸದ್ರಿ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ. ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಗಾಂಜಾವನ್ನು, ಸಾಗಾಣಿಕೆಗೆ ಬಳಸಿದ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:09/2026, ಕಲಂ: 8(c), 20(b)(ii)C NDPS Act-1985. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ,ವಿನೋದ್ ರವರುಗಳನ್ನು ಒಳಗೊಂಡ ತಂಡ ಕಾರ್ಯನಿರ್ವಹಿಸಿದೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular