Wednesday, January 21, 2026
Google search engine

Homeರಾಜ್ಯಬಜೆಟ್‌ ಮಂಡನೆಗೆ ʼಸಿದ್ದುʼ ಸಿದ್ಧತೆ : ರಾಜ್ಯ ಬಜೆಟ್ ಗಾಗಿ ಸರಣಿ ಸಭೆ

ಬಜೆಟ್‌ ಮಂಡನೆಗೆ ʼಸಿದ್ದುʼ ಸಿದ್ಧತೆ : ರಾಜ್ಯ ಬಜೆಟ್ ಗಾಗಿ ಸರಣಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸಿದ್ದು, ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಅತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಭೇಟಿ ನಂತರ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್‌ಗೆ ಭೇಟಿ ನೀಡಿದ್ದು, ಇತ್ತ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಗಾಗಿ ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಕರಡು ಮಸೂದೆ ಬಗ್ಗೆ ಸಮಾಲೋಚನೆ ನಡೆಸಿದ್ದು, ಮುಂದಿನ ದಿನಗಳಲ್ಲಿ, ಪ್ರತಿ ಇಲಾಖೆಯ ಸಂಬಂಧಿತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ತಯಾರಾಗಿರುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದ್ದು, ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಇನ್ನೂ ಜನವರಿ 22 ರಿಂದ 31ರವರೆಗೆ ಬೆಂಗಳೂರಿನಲ್ಲಿ ಜಂಟಿ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ MNREGA ಕುರಿತ ವಿಶೇಷ ಚರ್ಚೆ ನಡೆಯಲಿದ್ದು, ಅದೇ ಸಮಯದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆಸಿ, ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತ್ತುಗೊಳಿಸಲಾಗಿದೆ ಎಂದರು.

ಸಚಿವ ಆರ್.ಬಿ.ತಿಮ್ಮಾಪುರ ವಿರುದ್ದ ಕೇಳಿ ಬಂದಿರುವ ಆರೋಪ ಕುರಿತು ಮಾತನಾಡಿ, ನನಗೆ ಮಾಹಿತಿ ಇಲ್ಲ. ನೀವು ಈಗ ಕೇಳಿದಾಗಲೇ ಗೊತ್ತಾಗಿದ್ದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular