Thursday, January 22, 2026
Google search engine

Homeಅಪರಾಧಹಣ ಕೊಡದಿದ್ದರೆ ಮಾನಹಾನಿ ಬೆದರಿಕೆ: ಆರೋಪಿ ಮಹಿಳೆ ಬಂಧನ

ಹಣ ಕೊಡದಿದ್ದರೆ ಮಾನಹಾನಿ ಬೆದರಿಕೆ: ಆರೋಪಿ ಮಹಿಳೆ ಬಂಧನ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡರೂ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ತನ್ನ ಸಹಚರರ ಜೊತೆಗೂಡಿ ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬ್ಲ್ಯಾಕ್​ಮೇಲ್ ಕಾಟ ಎದುರಾಗಿದೆ. ಸದ್ಯ ಬ್ಲ್ಯಾಕ್​ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular