Friday, January 23, 2026
Google search engine

Homeಅಪರಾಧಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ : ಸ್ನೇಹಿತನೇ ಹಂತಕ

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ : ಸ್ನೇಹಿತನೇ ಹಂತಕ

ಧಾರವಾಡ: ಮೊನ್ನೆ ಬುಧವಾರ ಧಾರವಾಡ ನಗರದ ಹೊರವಲಯದಲ್ಲಿ ಪತ್ತೆಯಾಗಿದ್ದ 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಗಾಂಧಿ ಚೌಕ್ ನಿವಾಸಿ ಜಕಿಯಾ ಇತ್ತೀಚೆಗೆ ತನ್ನ ಪ್ಯಾರಾಮೆಡಿಕಲ್ ಕೋರ್ಸ್ ನ್ನು ಪೂರ್ಣಗೊಳಿಸಿದ್ದಳು. ಮಂಗಳವಾರ ಸಂಜೆ, ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಕೆಲಸಕ್ಕೆ ಹೊರ ಹೋಗುತ್ತಿರುವುದಾಗಿ ಹೇಳಿ ಹೋದವಳು ಮನೆಗೆ ವಾಪಾಸ್ ಬಂದಿರಲಿಲ್ಲ. ಮರುದಿನ ಬೆಳಗ್ಗೆ ಮನ್ಸೂರ್ ರಸ್ತೆಯ ಬಳಿಯ ಕೃಷಿ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ಹೇಳಿದ್ದಾರೆ.

ಅಲ್ಲದೆ ಜಕಿಯಾ ಮತ್ತು ಸಬೀರ್ ಸುಮಾರು ನಾಲ್ಕು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದ್ದು, ಇತ್ತೀಚೆಗೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿ, ಜನವರಿ 20 ರ ಸಂಜೆ ಇಬ್ಬರೂ ಭವಿಷ್ಯ ಕುರಿತು ಮಾತನಾಡುವಾಗ ಜಗಳ ತಾರಕಕ್ಕೇರಿ ಘರ್ಷಣೆ ಉಂಟಾಗಿರಬಹುದು ಎನ್ನಲಾಗಿದೆ.

ಇನ್ನೂ ಈ ಪ್ರಕರಣದ ವಿಚಾರವಾಗಿ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದು, ಆದರೆ ಪ್ರಾಥಮಿಕ ಸಾಕ್ಷ್ಯವು ವಿದ್ಯಾರ್ಥಿನಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಪ್ರಕರಣದಲ್ಲಿ ಆರೋಪಿ ಸಾಬೀರ್, ಕೊಲೆ ಮಾಡಿದ ಬಳಿಕ ಝಕಿಯಾ ನಾಪತ್ತೆಯಾಗಿದ್ದಾಳೆ, ಆಕೆಯನ್ನು ಹುಡುಕಿಕೊಡಿ ಎಂದು ಧಾರವಾಡ ಶಹರ ಠಾಣೆಗೆ ಹೋಗಿ ಹುಡುಕಿಕೊಡುವಂತೆ ಮನವಿ ಮಾಡಿದ್ದ.

ಅಲ್ಲದೆ, ತಾನೇ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದನು. ಆ ನಂತರ ಘಟನಾ ಸ್ಥಳಕ್ಕೆ ಪೊಲೀಸರು ಬಂದಾಗಲೂ ಅಲ್ಲೇ ಇದ್ದು ಏನೂ ಅರಿಯದವನಂತೆ ನಟಿಸಿದ್ದನು. ಆದರೆ, ಆತನ ನಡವಳಿಕೆಯ ಮೇಲೆ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವ ಸತ್ಯ ಹೊರ ಬಂದಿದೆ.

RELATED ARTICLES
- Advertisment -
Google search engine

Most Popular