ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಜನವರಿ 26 ರ ಬೆಳಿಗ್ಗೆ 9 ಗಂಟೆಗೆ ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಪಥಸಂಚಲನ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ವರದಿ: ಶಂಶೀರ್ ಬುಡೋಳಿ



