ಬೆಂಗಳೂರು: ರಾಜೀವ್ ಗೌಡ ಬಂಧನಕ್ಕೆ ಮೊದಲ ದಿನವೇ ಆದೇಶ ನೀಡಲಾಗಿತ್ತು. ಆದರೆ ಬಂಧಿಸುವಷ್ಟರಲ್ಲಿ ಅವರು ತಪ್ಪಿಸಿಕೊಂಡಿದ್ದಾರೆ. ಎಷ್ಟು ದಿನ ಅಡಗಿಕೊಂಡರೂ ಕೊನೆಗೆ ಖಂಡಿತವಾಗಿಯೂ ಅವರನ್ನು ಬಂಧಿಸುತ್ತೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಮುಲಾಜಿಲ್ಲದೆ ಹಾಗೂ ಯಾರ ಒತ್ತಡಕ್ಕೂ ಮಣಿಯದೆ ರಾಜೀವ್ ಗೌಡನನ್ನು ತಕ್ಷಣ ಬಂಧಿಸಲಾಗುವುದು ಎಂದರು.
ಇನ್ನೂ ಬೆಳಗಾವಿಯ 400 ಕೋಟಿ ರೂ. ರಾಬರಿ ಪ್ರಕರಣ ಕುರಿತು ಮಾತನಾಡಿದ ಸಚಿವರು, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಪತ್ರ ಬರೆದು ತನಿಖೆಗೆ ಸಹಕಾರ ಕೇಳಿದ್ದಾರೆ. ತನಿಖೆ ಪ್ರಾರಂಭಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಿಸಿದ ಅವರು, ಇಂದು ಸಂಜೆಯೊಳಗೆ ಸ್ಪಷ್ಟತೆ ಸಿಗಲಿದೆ. ಭಾಷಣದ ಪ್ರತಿಯನ್ನು ಇನ್ನೂ ನೋಡಿಲ್ಲ ಎಂದು ಹೇಳಿದರು.



